ಕೆಇಎ ಪೌರಾಡಳಿತ ನಿರ್ದೇಶನಾಲಯ ನೇಮಕಾತಿ 2026: ಕರ್ನಾಟಕ ಸರ್ಕಾರದ ಪೌರಾಡಳಿತ ನಿರ್ದೇಶನಾಲಯದ ಅಧೀನದಲ್ಲಿರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿರುವ ಕಲ್ಯಾಣ-ಕರ್ನಾಟಕ ವೃಂದದ ವಿವಿಧ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಐಟಿಐ ಪೂರೈಸಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಉದ್ಯೋಗ ವಿವರ
- ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) / ಪೌರಾಡಳಿತ ನಿರ್ದೇಶನಾಲಯ
- ಹುದ್ದೆಗಳ ಹೆಸರು: ನೀರು ಸರಬರಾಜು ಆಪರೇಟರ್, ಸಹಾಯಕ ನೀರು ಸರಬರಾಜು ಆಪರೇಟರ್, ಎಲೆಕ್ಟ್ರಿಷಿಯನ್ ಗ್ರೇಡ್-1 ಮತ್ತು ಎಲೆಕ್ಟ್ರಿಷಿಯನ್ ಗ್ರೇಡ್-2
- ಹುದ್ದೆಗಳ ಸಂಖ್ಯೆ: 210
- ಉದ್ಯೋಗ ಸ್ಥಳ: ಕರ್ನಾಟಕ (ಕಲ್ಯಾಣ-ಕರ್ನಾಟಕ ಭಾಗದ ನಗರ ಸ್ಥಳೀಯ ಸಂಸ್ಥೆಗಳು)
- ಅರ್ಜಿ ಸಲ್ಲಿಸುವ ಬಗೆ: ಆನ್ಲೈನ್ (Online)
ಹುದ್ದೆಗಳ ವಿವರ
- ನೀರು ಸರಬರಾಜು ಆಪರೇಟರ್: 80 ಹುದ್ದೆಗಳು
- ಎಲೆಕ್ಟ್ರಿಷಿಯನ್ ಗ್ರೇಡ್-1: 03 ಹುದ್ದೆಗಳು
- ಸಹಾಯಕ ನೀರು ಸರಬರಾಜು ಆಪರೇಟರ್: 122 ಹುದ್ದೆಗಳು
- ಎಲೆಕ್ಟ್ರಿಷಿಯನ್ ಗ್ರೇಡ್-2: 05 ಹುದ್ದೆಗಳು
ಒಟ್ಟು 210 ಹುದ್ದೆಗಳು ಕಲ್ಯಾಣ-ಕರ್ನಾಟಕ ಸ್ಥಳೀಯ ವೃಂದದ ಅಭ್ಯರ್ಥಿಗಳಿಗೆ ಲಭ್ಯವಿವೆ.
ವಿದ್ಯಾರ್ಹತೆ
ಪ್ರತಿಯೊಂದು ಹುದ್ದೆಗೂ ನಿಗದಿಪಡಿಸಿರುವ ನಿರ್ದಿಷ್ಟ ಶೈಕ್ಷಣಿಕ ಅರ್ಹತೆಗಳ ವಿವರ ಕೆಳಗಿನಂತಿದೆ:
- ನೀರು ಸರಬರಾಜು ಆಪರೇಟರ್: ಅಭ್ಯರ್ಥಿಗಳು ಎಸ್ಎಸ್ಎಲ್ಸಿ (SSLC) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಇದರೊಂದಿಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ಎಲೆಕ್ಟ್ರಿಕಲ್ ಅಥವಾ ಫಿಟ್ಟರ್ ಟ್ರೇಡ್ನಲ್ಲಿ 2 ವರ್ಷಗಳ ಐಟಿಐ (ITI) ಮುಗಿಸಿ ಎನ್ಟಿಸಿ (NTC) ಪ್ರಮಾಣಪತ್ರ ಹೊಂದಿರಬೇಕು ಹಾಗೂ ಯಾವುದೇ ಉದ್ಯಮದಲ್ಲಿ 1 ವರ್ಷದ ಅಪ್ರೆಂಟಿಸ್ಶಿಪ್ ತರಬೇತಿ ಪೂರೈಸಿ ಎನ್ಎಸಿ (NAC) ಪಡೆದಿರಬೇಕು.
- ಎಲೆಕ್ಟ್ರಿಷಿಯನ್ ಗ್ರೇಡ್-1: ಎಸ್ಎಸ್ಎಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಎಲೆಕ್ಟ್ರಿಕಲ್ ಟ್ರೇಡ್ನಲ್ಲಿ 2 ವರ್ಷಗಳ ಐಟಿಐ ಮುಗಿಸಿ ಎನ್ಟಿಸಿ ಪ್ರಮಾಣಪತ್ರ ಪಡೆದಿರಬೇಕು ಮತ್ತು 1 ವರ್ಷದ ಅಪ್ರೆಂಟಿಸ್ಶಿಪ್ ಪೂರ್ಣಗೊಳಿಸಿ ಎನ್ಎಸಿ ಪಡೆದಿರಬೇಕು.
- ಸಹಾಯಕ ನೀರು ಸರಬರಾಜು ಆಪರೇಟರ್: ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಎಲೆಕ್ಟ್ರಿಕಲ್ ಅಥವಾ ಫಿಟ್ಟರ್ ಟ್ರೇಡ್ನಲ್ಲಿ 2 ವರ್ಷಗಳ ಐಟಿಐ ತೇರ್ಗಡೆಯಾಗಿ ಎನ್ಟಿಸಿ ಪ್ರಮಾಣಪತ್ರ ಹೊಂದಿರಬೇಕು.
- ಎಲೆಕ್ಟ್ರಿಷಿಯನ್ ಗ್ರೇಡ್-2: ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಎಲೆಕ್ಟ್ರಿಕಲ್ ಟ್ರೇಡ್ನಲ್ಲಿ 2 ವರ್ಷಗಳ ಐಟಿಐ ಮುಗಿಸಿ ಎನ್ಟಿಸಿ ಪ್ರಮಾಣಪತ್ರ ಪಡೆದಿರಬೇಕು.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ ಮತ್ತು ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಲ್ಲ.
ವಯೋಮಿತಿ & ವಯೋಮಿತಿಯಲ್ಲಿ ಸಡಿಲಿಕೆ
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಸರ್ಕಾರದ ಆದೇಶದಂತೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ಒಳಗೊಂಡಂತೆ ವರ್ಗವಾರು ಗರಿಷ್ಠ ವಯೋಮಿತಿ ಕೆಳಗಿನಂತಿದೆ:
- ಸಾಮಾನ್ಯ ಅರ್ಹತೆಯ (GM) ಅಭ್ಯರ್ಥಿಗಳಿಗೆ: ಗರಿಷ್ಠ 40 ವರ್ಷಗಳು
- ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ: ಗರಿಷ್ಠ 43 ವರ್ಷಗಳು
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ: ಗರಿಷ್ಠ 45 ವರ್ಷಗಳು
ಇತರೆ ವಿಶೇಷ ವಯೋಮಿತಿ ಸಡಿಲಿಕೆ ವಿವರಗಳು:
- ಮಾಜಿ ಸೈನಿಕರಿಗೆ ಅವರು ಸೇವೆ ಸಲ್ಲಿಸಿದ ಅವಧಿಯ ಜೊತೆಗೆ ಹೆಚ್ಚುವರಿ 3 ವರ್ಷಗಳ ಸಡಿಲಿಕೆ ಇರುತ್ತದೆ.
- ವಿಶೇಷ ಚೇತನ (ಅಂಗವಿಕಲ) ಅಭ್ಯರ್ಥಿಗಳಿಗೆ ಹಾಗೂ ವಿಧವೆಯರಿಗೆ ಗರಿಷ್ಠ ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ನೀಡಲಾಗಿದೆ.
- ಸರ್ಕಾರಿ ಸೇವೆ ಅಥವಾ ನಿಗಮಗಳಲ್ಲಿ ಸೇವೆ ಸಲ್ಲಿಸಿದವರಿಗೆ ಗರಿಷ್ಠ 10 ವರ್ಷಗಳವರೆಗೆ ಅಥವಾ ಸೇವೆ ಸಲ್ಲಿಸಿದ ಅವಧಿಯವರೆಗೆ ವಯೋಮಿತಿ ರಿಯಾಯಿತಿ ದೊರೆಯುತ್ತದೆ.
- ಜೀತ ಕಾರ್ಮಿಕರಾಗಿದ್ದ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
ವೇತನಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಗುಣವಾಗಿ ಕರ್ನಾಟಕ ರಾಜ್ಯ ಸರ್ಕಾರದ ನಿಯಮಾನುಸಾರ ಮಾಸಿಕ ವೇತನ ಹಾಗೂ ಭತ್ಯೆಗಳು ದೊರೆಯಲಿವೆ:
- ನೀರು ಸರಬರಾಜು ಆಪರೇಟರ್ ಮತ್ತು ಎಲೆಕ್ಟ್ರಿಷಿಯನ್ ಗ್ರೇಡ್-1 ಹುದ್ದೆಗಳಿಗೆ: ತಿಂಗಳಿಗೆ 37500 ರಿಂದ 76100 ರೂಪಾಯಿಗಳ ವೇತನಶ್ರೇಣಿ ಇರುತ್ತದೆ.
- ಸಹಾಯಕ ನೀರು ಸರಬರಾಜು ಆಪರೇಟರ್ ಮತ್ತು ಎಲೆಕ್ಟ್ರಿಷಿಯನ್ ಗ್ರೇಡ್-2 ಹುದ್ದೆಗಳಿಗೆ: ತಿಂಗಳಿಗೆ 34100 ರಿಂದ 67600 ರೂಪಾಯಿಗಳ ವೇತನಶ್ರೇಣಿ ಅನ್ವಯಿಸುತ್ತದೆ.
ಈ ಹುದ್ದೆಗಳಲ್ಲಿ ನೇರ ನೇಮಕಾತಿ ಹೊಂದಿದ ನೌಕರರಿಗೆ ಹೊಸ ಪಿಂಚಣಿ ಯೋಜನೆ (ಎನ್ಪಿಎಸ್) ಅನ್ವಯವಾಗಲಿದ್ದು, ಆರಂಭದಲ್ಲಿ 2 ವರ್ಷಗಳ ಖಾಯಂಪೂರ್ವ (Probationary) ಅವಧಿ ಇರುತ್ತದೆ.
ಅರ್ಜಿ ಶುಲ್ಕ
ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರವೇ ಪಾವತಿಸಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಪಾವತಿಸಿದ ಶುಲ್ಕವನ್ನು ಹಿಂತಿರುಗಿಸಲಾಗುವುದಿಲ್ಲ:
- ಸಾಮಾನ್ಯ ಅರ್ಹತೆ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 750 ರೂಪಾಯಿಗಳು
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ತೃತೀಯ ಲಿಂಗಿ ಅಭ್ಯರ್ಥಿಗಳಿಗೆ: 500 ರೂಪಾಯಿಗಳು
- ವಿಶೇಷ ಚೇತನ ಅಭ್ಯರ್ಥಿಗಳಿಗೆ: 250 ರೂಪಾಯಿಗಳು
ಅರ್ಜಿ ಸಲ್ಲಿಸುವ ವಿಧಾನ
- ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
- ಮುಖಪುಟದಲ್ಲಿ ನೇಮಕಾತಿ ವಿಭಾಗಕ್ಕೆ ಹೋಗಿ, ಪೌರಾಡಳಿತ ನಿರ್ದೇಶನಾಲಯದ ವಿವಿಧ ಹುದ್ದೆಗಳ ನೇಮಕಾತಿ 2026 ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಆನ್ಲೈನ್ ಅರ್ಜಿ ನಮೂನೆಯಲ್ಲಿ ನಿಮ್ಮ ಹೆಸರು, ಜನ್ಮ ದಿನಾಂಕ, ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ ನಮೂದಿಸಿ ನೋಂದಣಿ ಮಾಡಿಕೊಳ್ಳಿ.
- ವೈಯಕ್ತಿಕ ವಿವರಗಳು, ಶೈಕ್ಷಣಿಕ ಮಾಹಿತಿ ಹಾಗೂ ಮೀಸಲಾತಿ ಪ್ರಮಾಣಪತ್ರಗಳ ಆರ್ಡಿ (RD) ಸಂಖ್ಯೆಗಳನ್ನು ಸರಿಯಾಗಿ ನಮೂದಿಸಿ.
- ಬಿಳಿ ಹಿನ್ನೆಲೆಯುಳ್ಳ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಮತ್ತು ಕಪ್ಪು ಶಾಯಿಯ ಸಹಿಯನ್ನು ನಿಗದಿತ ಅಳತೆಯಲ್ಲಿ ಅಪ್ಲೋಡ್ ಮಾಡಿ.
- ನಮೂದಿಸಿದ ಎಲ್ಲಾ ವಿವರಗಳನ್ನು ಮರುಪರಿಶೀಲಿಸಿ, ನಿಗದಿತ ಅರ್ಜಿ ಶುಲ್ಕವನ್ನು ಆನ್ಲೈನ್ ಪೇಮೆಂಟ್ ಗೇಟ್ವೇ ಮೂಲಕ ಪಾವತಿಸಿ.
- ಅಂತಿಮವಾಗಿ ಅರ್ಜಿಯನ್ನು ಸಬ್ಮಿಟ್ ಮಾಡಿ, ಭವಿಷ್ಯದ ಬಳಕೆಗಾಗಿ ಅರ್ಜಿ ಪ್ರತಿಯ ಪ್ರಿಂಟ್ ಪಡೆದಿಟ್ಟುಕೊಳ್ಳಿ.
ಆಯ್ಕೆ ವಿಧಾನ
ಅರ್ಹ ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
- ಸ್ಪರ್ಧಾತ್ಮಕ ಪರೀಕ್ಷೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಅಥವಾ ಆಫ್ಲೈನ್ ಓಎಂಆರ್ (OMR) ಮಾದರಿಯಲ್ಲಿ ನಡೆಯಲಿದೆ.
- ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ: ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಹಂತದಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಓದಿಲ್ಲದ ಅಭ್ಯರ್ಥಿಗಳಿಗೆ 150 ಅಂಕಗಳ ಕನ್ನಡ ಭಾಷಾ ಪರೀಕ್ಷೆ ಇರುತ್ತದೆ. ಇದರಲ್ಲಿ ಕನಿಷ್ಠ 50 ಅಂಕಗಳನ್ನು ಪಡೆಯುವುದು ಕಡ್ಡಾಯ.
- ಪತ್ರಿಕೆ-1 (ಸಾಮಾನ್ಯ ಜ್ಞಾನ): ಪ್ರಚಲಿತ ವಿದ್ಯಮಾನಗಳು, ಸಂವಿಧಾನ, ಕರ್ನಾಟಕದ ಇತಿಹಾಸ, ಭೂಗೋಳ, ಪರಿಸರ ಹಾಗೂ ಆರ್ಥಿಕತೆಗೆ ಸಂಬಂಧಿಸಿದಂತೆ 100 ಅಂಕಗಳ 100 ಬಹುಆಯ್ಕೆ ಪ್ರಶ್ನೆಗಳಿರುತ್ತವೆ. ಪರೀಕ್ಷಾ ಅವಧಿ 2 ಗಂಟೆ.
- ಪತ್ರಿಕೆ-2 (ನಿರ್ದಿಷ್ಟ ಪತ್ರಿಕೆ): ಆಯಾ ಹುದ್ದೆಯ ತಾಂತ್ರಿಕ ವಿಷಯಗಳಿಗೆ ಸಂಬಂಧಿಸಿದಂತೆ 100 ಅಂಕಗಳ 100 ಬಹುಆಯ್ಕೆ ಪ್ರಶ್ನೆಗಳಿರುತ್ತವೆ. ಪರೀಕ್ಷಾ ಅವಧಿ 2 ಗಂಟೆ.
- ಋಣಾತ್ಮಕ ಮೌಲ್ಯಮಾಪನ: ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗದಷ್ಟು (0.25) ಅಂಕಗಳನ್ನು ಕಳೆಯಲಾಗುತ್ತದೆ. ಉತ್ತರಿಸದ ಪ್ರಶ್ನೆಗಳಿಗೆ ಓಎಂಆರ್ ಶೀಟ್ನಲ್ಲಿರುವ 5ನೇ ವೃತ್ತವನ್ನು ಶೇಡ್ ಮಾಡುವುದು ಕಡ್ಡಾಯ, ಇಲ್ಲವಾದಲ್ಲಿ ನೆಗೆಟಿವ್ ಅಂಕ ಅನ್ವಯವಾಗುತ್ತದೆ.
- ಅರ್ಹತಾ ಅಂಕಗಳು: ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಕನಿಷ್ಠ ಶೇಕಡಾ 35 ರಷ್ಟು ಅಂಕಗಳನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ.
- ಮೂಲ ದಾಖಲಾತಿಗಳ ಪರಿಶೀಲನೆ: ಲಿಖಿತ ಪರೀಕ್ಷೆಯ ಮೆರಿಟ್ ಪಟ್ಟಿಯ ನಂತರ ಸಂಬಂಧಪಟ್ಟ ಇಲಾಖೆಯಿಂದ ಮೂಲ ದಾಖಲೆಗಳ ಪರಿಶೀಲನೆ ನಡೆಸಿ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ.
ಪ್ರಶ್ನೋತ್ತರಗಳು (FAQs)
ಈ ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು?
ಎಸ್ಎಸ್ಎಲ್ಸಿ ಜೊತೆಗೆ ಸಂಬಂಧಪಟ್ಟ ಟ್ರೇಡ್ನಲ್ಲಿ 2 ವರ್ಷಗಳ ಐಟಿಐ ಪೂರೈಸಿದ ಮತ್ತು ಅಗತ್ಯವಿರುವ ಹುದ್ದೆಗಳಿಗೆ ಅಪ್ರೆಂಟಿಸ್ಶಿಪ್ ಮುಗಿಸಿದ ಕಲ್ಯಾಣ-ಕರ್ನಾಟಕ ಸ್ಥಳೀಯ ವೃಂದದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನೆಗೆಟಿವ್ ಅಂಕಗಳು ಇವೆಯೇ?
ಹೌದು, ಪರೀಕ್ಷೆಯಲ್ಲಿ ತಪ್ಪು ಉತ್ತರಗಳಿಗೆ ಋಣಾತ್ಮಕ ಮೌಲ್ಯಮಾಪನ ಇರುತ್ತದೆ. ಪ್ರತಿಯೊಂದು ತಪ್ಪು ಉತ್ತರಕ್ಕೆ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30.09.2026 ಆಗಿರುತ್ತದೆ. ಶುಲ್ಕ ಪಾವತಿಸಲು 01.10.2026 ಕೊನೆಯ ದಿನವಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆ ಯಾವಾಗ ನಡೆಯುತ್ತದೆ?
ಅಧಿಸೂಚನೆಯ ಪ್ರಕಾರ ನವೆಂಬರ್ 2026 ರ ಮಾಹೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದ್ದು, ನಿಖರ ವೇಳಾಪಟ್ಟಿಯನ್ನು ಪ್ರಾಧಿಕಾರವು ನಂತರ ಪ್ರಕಟಿಸಲಿದೆ.
ಅರ್ಜಿ ಶುಲ್ಕವನ್ನು ಆಫ್ಲೈನ್ ಮೂಲಕ ಪಾವತಿಸಬಹುದೇ?
ಇಲ್ಲ, ಅರ್ಜಿ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ಮೂಲಕ ಕೇವಲ ಆನ್ಲೈನ್ ವಿಧಾನದಲ್ಲಿ ಮಾತ್ರ ಪಾವತಿಸಲು ಅವಕಾಶವಿದೆ.
ಪ್ರಮುಖ ದಿನಾಂಕಗಳು
| ವಿವರ | ದಿನಾಂಕ |
| ಅಧಿಕೃತ ಅಧಿಸೂಚನೆ ಪ್ರಕಟವಾದ ದಿನಾಂಕ | 11.09.2026 |
| ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನಾಂಕ | 16.09.2026 |
| ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30.09.2026 |
| ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ | 01.10.2026 |
| ಸ್ಪರ್ಧಾತ್ಮಕ ಪರೀಕ್ಷೆ ನಡೆಯುವ ತಿಂಗಳು | ನವೆಂಬರ್ 2026 |
- ಜಿಲ್ಲಾ ನ್ಯಾಯಾಲಯ ನೇಮಕಾತಿ 2026: 16.09.2026
- ಜಿಲ್ಲಾ ನ್ಯಾಯಾಲಯದಲ್ಲಿ ಪ್ಯೂನ್ ಹುದ್ದೆಗಳಿಗೆ ಅರ್ಜಿ ಅಹ್ವಾನ: 17.09.2026
- ಕರ್ನಾಟಕ ಸಮಾಜ ಕಲ್ಯಾಣ ಇಲಾಖೆ ಶಿಕ್ಷಕರ ನೇಮಕಾತಿ 2026: 140 ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: 18-09-2026
- ಡಿಸಿ ಕಚೇರಿಯಿಂದ ನೇರ ನೇಮಕಾತಿ ಅಧಿಸೂಚನೆ 2026 – 19.09.2026
- ಕರ್ನಾಟಕ ಅಂಚೆ ಇಲಾಖೆ ನೇಮಕಾತಿ 2026: ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಅಹ್ವಾನ – 19-09-2026
- SSC JE ನೇಮಕಾತಿ 2026: 1748 ಕಿರಿಯ ಇಂಜಿನಿಯರ್ ಹುದ್ದೆಗಳ ಬೃಹತ್ ಅಧಿಸೂಚನೆ ಪ್ರಕಟ – 22.09.2026
- ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇರ ನೇಮಕಾತಿ 2026 – 25-09-2026
- KPSC ನೇಮಕಾತಿ 2026: 83 ಗ್ರೂಪ್ ಎ & ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ – 26-09-2026
- ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ ನೇಮಕಾತಿ 2026 – 28/09/2026
- ಜಿಲ್ಲಾ ನ್ಯಾಯಾಲಯ ನೇರ ನೇಮಕಾತಿ 2026 – 30.09.2026
- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2026: 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಅಹ್ವಾನ! – 03-10-2026
- ಕೊಡಗು ಜಿಲ್ಲಾ ನ್ಯಾಯಾಲಯ ನೇಮಕಾತಿ 2026: ಜವಾನ, ಚಾಲಕ ಹುದ್ದೆಗಳಿಗೆ ಅರ್ಜಿ – 03-10-2026
- SSC ಇಂದ 2536 ಹುದ್ದೆಗಳ ಭರ್ಜರಿ ನೇಮಕಾತಿ 2026 – 07-10-2026
ಪ್ರಮುಖ ಲಿಂಕುಗಳು
| ವಿವರ | ಲಿಂಕ್ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಟೆಲಿಗ್ರಾಮ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |









