IBPS Recruitment 2026: ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಇದು ಒಂದು ಸುವರ್ಣ ಅವಕಾಶವಾಗಿದೆ. ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್ (IBPS) ವಿವಿಧ ಸಾರ್ವಜನಿಕ ರಂಗದ ಬ್ಯಾಂಕ್‌ಗಳಲ್ಲಿ ಖಾಲಿ ಇರುವ 11403 ಕಸ್ಟಮರ್ ಸರ್ವಿಸ್ ಅಸೋಸಿಯೇಟ್ (CSA) ಹುದ್ದೆಗಳ ಭರ್ತಿಗೆ ಅಧಿಕೃತ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಉದ್ಯೋಗ ವಿವರ
- ನೇಮಕಾತಿ ಸಂಸ್ಥೆ: ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್ (IBPS)
- ಹುದ್ದೆಗಳ ಹೆಸರು: ಕಸ್ಟಮರ್ ಸರ್ವಿಸ್ ಅಸೋಸಿಯೇಟ್ (CSA) / ಕ್ಲರ್ಕ್
- ಹುದ್ದೆಗಳ ಸಂಖ್ಯೆ: 11403
- ಉದ್ಯೋಗ ಸ್ಥಳ: ಭಾರತದಾದ್ಯಂತ (ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ)
- ಅರ್ಜಿ ಸಲ್ಲಿಸುವ ಬಗೆ: Online
ಹುದ್ದೆಗಳ ವಿವರ
- ಕಸ್ಟಮರ್ ಸರ್ವಿಸ್ ಅಸೋಸಿಯೇಟ್ (CSA) / ಕ್ಲರ್ಕ್: 11403 ಹುದ್ದೆಗಳು (ಕರ್ನಾಟಕದಲ್ಲಿ 1414 ಹುದ್ದೆಗಳು ಲಭ್ಯವಿವೆ)
ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ (Graduation) ಪೂರ್ಣಗೊಳಿಸಿರಬೇಕು. ಕಂಪ್ಯೂಟರ್ ಕಾರ್ಯಾಚರಣೆಯ ಜ್ಞಾನ ಕಡ್ಡಾಯವಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ರಾಜ್ಯದ ಸ್ಥಳೀಯ ಭಾಷೆಯಲ್ಲಿ (ಕರ್ನಾಟಕಕ್ಕೆ ಕನ್ನಡ) ಓದಲು, ಬರೆಯಲು ಮತ್ತು ಮಾತನಾಡಲು ತಿಳಿದಿರಬೇಕು.
ವಯೋಮಿತಿ & ವಯೋಮಿತಿಯಲ್ಲಿ ಸಡಿಲಿಕೆ
- ಕನಿಷ್ಠ ವಯಸ್ಸು: 20 ವರ್ಷಗಳು
- ಗರಿಷ್ಠ ವಯಸ್ಸು: 28 ವರ್ಷಗಳು (01.08.2026 ರಂತೆ)
- ವಯೋಮಿತಿ ಸಡಿಲಿಕೆ ವಿವರ:
- SC / ST ಅಭ್ಯರ್ಥಿಗಳಿಗೆ: 5 ವರ್ಷಗಳು
- OBC (NCL) ಅಭ್ಯರ್ಥಿಗಳಿಗೆ: 3 ವರ್ಷಗಳು
- PwBD ಅಭ್ಯರ್ಥಿಗಳಿಗೆ: 10 ವರ್ಷಗಳು
- ಮಾಜಿ ಸೈನಿಕರು (ESM): ಸೇವಾ ಅವಧಿ + 3 ವರ್ಷಗಳು
ವೇತನಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಮೂಲ ವೇತನ 24050 ರಿಂದ ಆರಂಭವಾಗಿ ಹಂತ ಹಂತವಾಗಿ 64480 ವರೆಗೆ ಇರಲಿದೆ. ಇದರೊಂದಿಗೆ ನಿಯಮಾನುಸಾರ ವಿವಿಧ ಭತ್ಯೆಗಳು ಲಭ್ಯವಿರುತ್ತವೆ.
ಅರ್ಜಿ ಶುಲ್ಕ
- SC / ST / PwBD / ESM / DESM ಅಭ್ಯರ್ಥಿಗಳಿಗೆ: 175 ರೂ.
- ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 850 ರೂ.
- ಪಾವತಿ ವಿಧಾನ: ಆನ್‌ಲೈನ್ (Debit Card, Credit Card, Internet Banking, UPI ಮೂಲಕ)
ಅರ್ಜಿ ಸಲ್ಲಿಸುವ ವಿಧಾನ
- ಮೊದಲು IBPS ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
- ಮುಖಪುಟದಲ್ಲಿ “CRP CSA” ವಿಭಾಗವನ್ನು ಆಯ್ಕೆ ಮಾಡಿ “CLICK HERE TO APPLY ONLINE FOR CRP-CSA-XVI” ಲಿಂಕ್ ಮೇಲೆ ಕ್ಲಿಕ್ ಮಾಡಿ.
- “CLICK HERE FOR NEW REGISTRATION” ಮೇಲೆ ಕ್ಲಿಕ್ ಮಾಡಿ ನಿಮ್ಮ ಮೂಲ ವಿವರಗಳನ್ನು ನಮೂದಿಸಿ ನೋಂದಣಿ ಮಾಡಿಕೊಳ್ಳಿ.
- ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್ ಬಳಸಿ ಲಾಗಿನ್ ಆಗಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅಗತ್ಯ ದಾಖಲೆಗಳು, ಭಾವಚಿತ್ರ, ಸಹಿ, ಎಡಗೈ ಹೆಬ್ಬೆರಳ ಗುರುತು ಮತ್ತು ಸ್ವಯಂ ಘೋಷಣಾ ಪತ್ರವನ್ನು ನಿಗದಿತ ಅಳತೆಯಲ್ಲಿ ಅಪ್‌ಲೋಡ್ ಮಾಡಿ.
- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ.
- ಅಂತಿಮವಾಗಿ ಅರ್ಜಿಯನ್ನು ಸಲ್ಲಿಸಿ (Submit) ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಪ್ರಿಂಟ್‌ಔಟ್ ತೆಗೆದುಕೊಳ್ಳಿ.
ಆಯ್ಕೆ ವಿಧಾನ
ಅಭ್ಯರ್ಥಿಗಳ ಆಯ್ಕೆಯನ್ನು ಎರಡು ಹಂತದ ಆನ್‌ಲೈನ್ ಪರೀಕ್ಷೆಗಳ ಮೂಲಕ ಮಾಡಲಾಗುತ್ತದೆ.
- ಆನ್‌ಲೈನ್ ಪೂರ್ವಭಾವಿ ಪರೀಕ್ಷೆ
- ಆನ್‌ಲೈನ್ ಮುಖ್ಯ ಪರೀಕ್ಷೆ
- ಸ್ಥಳೀಯ ಭಾಷಾ ಪ್ರಾವೀಣ್ಯತಾ ಪರೀಕ್ಷೆ
ಪ್ರಶ್ನೋತ್ತರಗಳು (FAQs)
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?
ಅರ್ಜಿ ಸಲ್ಲಿಸಲು 21.08.2026 ಕೊನೆಯ ದಿನಾಂಕವಾಗಿದೆ.
ಕರ್ನಾಟಕದಲ್ಲಿ ಎಷ್ಟು ಹುದ್ದೆಗಳು ಲಭ್ಯವಿವೆ?
ಕರ್ನಾಟಕ ರಾಜ್ಯಕ್ಕೆ ಒಟ್ಟು 1414 ಹುದ್ದೆಗಳು ಲಭ್ಯವಿವೆ.
ಪರೀಕ್ಷೆಯನ್ನು ಕನ್ನಡ ಭಾಷೆಯಲ್ಲಿ ಬರೆಯಬಹುದೇ?
ಹೌದು, ಕರ್ನಾಟಕದ ಅಭ್ಯರ್ಥಿಗಳಿಗೆ ಇಂಗ್ಲಿಷ್, ಹಿಂದಿ ಜೊತೆಗೆ ಕನ್ನಡ ಮತ್ತು ಕೊಂಕಣಿ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ.
ಅರ್ಜಿ ಶುಲ್ಕ ಎಷ್ಟು?
SC, ST, PwBD ಮತ್ತು ESM ಅಭ್ಯರ್ಥಿಗಳಿಗೆ 175 ರೂ. ಹಾಗೂ ಇತರೆ ಅಭ್ಯರ್ಥಿಗಳಿಗೆ 850 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಪೂರ್ವಭಾವಿ ಪರೀಕ್ಷೆ ಯಾವಾಗ ನಡೆಯುತ್ತದೆ?
ಪೂರ್ವಭಾವಿ ಪರೀಕ್ಷೆಯು ಅಕ್ಟೋಬರ್ 2026 ರಂದು ನಡೆಯಲಿದೆ.
ಪ್ರಮುಖ ದಿನಾಂಕಗಳು
| ಚಟುವಟಿಕೆ | ದಿನಾಂಕ |
| ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ | 01.08.2026 |
| ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಕೊನೆಯ ದಿನಾಂಕ | 21.08.2026 |
| ಆನ್‌ಲೈನ್ ಪೂರ್ವಭಾವಿ ಪರೀಕ್ಷೆ | ಅಕ್ಟೋಬರ್ 2026 |
| ಪೂರ್ವಭಾವಿ ಪರೀಕ್ಷೆಯ ಫಲಿತಾಂಶ | ನವೆಂಬರ್ 2026 |
| ಆನ್‌ಲೈನ್ ಮುಖ್ಯ ಪರೀಕ್ಷೆ | ಡಿಸೆಂಬರ್ 2026 |
| ಹಂಚಿಕೆ (Provisional Allotment) | ಮಾರ್ಚ್ 2027 |
- ಕರ್ನಾಟಕ ಅಗ್ನಿಶಾಮಕ ಇಲಾಖೆ ನೇಮಕಾತಿ: 1828 ಹುದ್ದೆಗಳು
- SDA, ಕಂಪ್ಯೂಟರ್ ಆಪರೇಟರ್ ಹಾಗೂ ಪ್ಯೂನ್ ಹುದ್ದೆಗಳಿಗೆ ನೇರ ಸಂದರ್ಶನಕ್ಕೆ ಅರ್ಜಿ ಅಹ್ವಾನ: 04-08-2026
- ಸಹಕಾರಿ ಬ್ಯಾಂಕ್ ನೇಮಕಾತಿ 2026 – 11-08-2026
- ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ನೇಮಕಾತಿ 2026 – 19-08-2026
- ಆಧಾರ್ ಸೇವಾ ಕೇಂದ್ರ ನೇಮಕಾತಿ 2026 – 20-08-2026
- ಡಿಸಿ ಕಚೇರಿ ನೇರ ನೇಮಕಾತಿ 2026 – 21-08-2026
- ಜಿಲ್ಲಾ ನ್ಯಾಯಾಲಯ ನೇಮಕಾತಿ 2026: 56 ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ – 24-08-2028
- ಡಿಸಿಸಿ ಬ್ಯಾಂಕ್ ನೇಮಕಾತಿ 2026 – 27-08-2026
- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2026: 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಅಹ್ವಾನ! – 31.08.2026
- ಜಿಲ್ಲಾ ನ್ಯಾಯಾಲಯ ನೇಮಕಾತಿ 2026 – 31.08.2026
- KPSC KAS 319 ನೇಮಕಾತಿ ಅಧಿಸೂಚನೆ 2026 – 31-08-2026
- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2026: 56 ಆನೆ ಕವಾಡಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ – 04/09/2026
ಪ್ರಮುಖ ಲಿಂಕುಗಳು
| ವಿವರ | ಲಿಂಕ್ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಟೆಲಿಗ್ರಾಮ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |









