KSLSA Recruitment 2026: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಶಾಖಾಧಿಕಾರಿ (Section Officer) ಹುದ್ದೆಗಳ ಭರ್ತಿಗೆ ಅಧಿಕೃತ ನೇಮಕಾತಿ ಅಧಿಸೂಚನೆ ಹೊರಬಿದ್ದಿದೆ. ಕಾನೂನು ಪದವಿ ಪೂರ್ಣಗೊಳಿಸಿ ಸರಕಾರಿ ವಲಯದಲ್ಲಿ ಅತ್ಯುತ್ತಮ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಈ ನೇಮಕಾತಿಯ ಕುರಿತಾದ ಸಂಪೂರ್ಣ ವಿವರಗಳನ್ನು ಕೆಳಗೆ ನೀಡಲಾಗಿದೆ.
ಉದ್ಯೋಗ ವಿವರ
- ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು (KSLSA)
- ಹುದ್ದೆಗಳ ಹೆಸರು: ಶಾಖಾಧಿಕಾರಿ (Section Officer)
- ಹುದ್ದೆಗಳ ಸಂಖ್ಯೆ: 20 (ಉಳಿದ ಮೂಲ ವೃಂದ – 18, ಕಲ್ಯಾಣ ಕರ್ನಾಟಕ – 02)
- ಉದ್ಯೋಗ ಸ್ಥಳ: ಬೆಂಗಳೂರು ಮತ್ತು ಕರ್ನಾಟಕದಾದ್ಯಂತ ಇರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು
- ಅರ್ಜಿ ಸಲ್ಲಿಸುವ ಬಗೆ: Online (ಆನ್‌ಲೈನ್ ಮೂಲಕ)
ಹುದ್ದೆಗಳ ವಿವರ
- ಶಾಖಾಧಿಕಾರಿ (ಉಳಿದ ಮೂಲ ವೃಂದ): 18 ಹುದ್ದೆಗಳು
- ಶಾಖಾಧಿಕಾರಿ (ಕಲ್ಯಾಣ ಕರ್ನಾಟಕ ವೃಂದ): 02 ಹುದ್ದೆಗಳು
ವಿದ್ಯಾರ್ಹತೆ
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ (LL.B) ಹೊಂದಿರಬೇಕು.
ವಯೋಮಿತಿ & ವಯೋಮಿತಿಯಲ್ಲಿ ಸಡಿಲಿಕೆ
ದಿನಾಂಕ 20.07.2026 ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು. ಗರಿಷ್ಠ ವಯೋಮಿತಿ ವಿವರಗಳು ಈ ಕೆಳಗಿನಂತಿವೆ:
- ಸಾಮಾನ್ಯ ವರ್ಗದ ಅಭ್ಯರ್ಥಿಗಳು: 40 ವರ್ಷಗಳು
- ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳು: 43 ವರ್ಷಗಳು
- ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳು: 45 ವರ್ಷಗಳು
ಕರ್ನಾಟಕ ನಾಗರಿಕ ಸೇವಾ ನಿಯಮಗಳ ಪ್ರಕಾರ ಅರ್ಹ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಹೆಚ್ಚುವರಿ ಸಡಿಲಿಕೆ ಇರಲಿದೆ.
ವೇತನಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 69,250 – 1,34,200 (69250-1650-74200-1900-85600-2300-99400-2700-115600-3100-134200) ವೇತನ ಶ್ರೇಣಿ ಸಿಗಲಿದೆ.
ಅರ್ಜಿ ಶುಲ್ಕ
- ಸಾಮಾನ್ಯ ವರ್ಗ, ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: ರೂ. 1,000/-
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ: ರೂ. 500/-
- ಪಾವತಿ ವಿಧಾನ: UPI, ನೆಟ್ ಬ್ಯಾಂಕಿಂಗ್ ಅಥವಾ ಡೆಬಿಟ್ ಕಾರ್ಡ್ ಮೂಲಕ ಆನ್‌ಲೈನ್‌ನಲ್ಲಿ ಪಾವತಿಸಬಹುದು.
ಅರ್ಜಿ ಸಲ್ಲಿಸುವ ವಿಧಾನ
- ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
- ಶಾಖಾಧಿಕಾರಿ ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಐಡಿ ಬಳಸಿ ನೋಂದಣಿ ಮಾಡಿಕೊಳ್ಳಿ.
- ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಶೈಕ್ಷಣಿಕ ವಿವರಗಳು, ಆಧಾರ್ ಸಂಖ್ಯೆ ಮತ್ತು ಇತರ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.
- ಶ್ವೇತ ವರ್ಣದ ಹಿನ್ನೆಲೆಯುಳ್ಳ ಭಾವಚಿತ್ರ ಹಾಗೂ ಸಹಿಯನ್ನು ನಿಗದಿತ ಗಾತ್ರದಲ್ಲಿ ಅಪ್‌ಲೋಡ್ ಮಾಡಿ.
- ಆನ್‌ಲೈನ್ ಪಾವತಿ ಗೇಟ್‌ವೇ ಮೂಲಕ ನಿಗದಿತ ಅರ್ಜಿ ಶುಲ್ಕ ಪಾವತಿಸಿ.
- ಅರ್ಜಿ ಭರ್ತಿಯಾದ ನಂತರ ‘Preview’ ಪರಿಶೀಲಿಸಿ, ‘Submit’ ಮಾಡಿ ಹಾಗೂ ಮುಂದಿನ ಉಲ್ಲೇಖಕ್ಕಾಗಿ ಪ್ರಿಂಟ್‌ಔಟ್ ತೆಗೆದಿಟ್ಟುಕೊಳ್ಳಿ.
ಆಯ್ಕೆ ವಿಧಾನ
- ಸ್ಪರ್ಧಾತ್ಮಕ ಪರೀಕ್ಷೆ: 600 ಅಂಕಗಳಿಗೆ (ಪತ್ರಿಕೆ-1: 300 ಅಂಕಗಳು, ಪತ್ರಿಕೆ-2: 300 ಅಂಕಗಳು) ಆಫ್‌ಲೈನ್ OMR ಮಾದರಿಯಲ್ಲಿ ಬೆಂಗಳೂರಿನಲ್ಲಿ ಪರೀಕ್ಷೆ ನಡೆಯಲಿದೆ.
- ಋಣಾತ್ಮಕ ಮೌಲ್ಯಮಾಪನ: ಪ್ರತಿ ತಪ್ಪು ಉತ್ತರಕ್ಕೆ 1/4 (0.75) ಅಂಕಗಳನ್ನು ಕಡಿತಗೊಳಿಸಲಾಗುವುದು.
- ಸಂದರ್ಶನ: ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು 1:5 ಅನುಪಾತದಲ್ಲಿ 25 ಅಂಕಗಳ ಸಂದರ್ಶನಕ್ಕೆ ಕರೆಯಲಾಗುವುದು.
ಪ್ರಶ್ನೋತ್ತರಗಳು (FAQs)
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 19.08.2026.
ಶಾಖಾಧಿಕಾರಿ ಹುದ್ದೆಗೆ ಅಗತ್ಯವಿರುವ ವಿದ್ಯಾರ್ಹತೆ ಏನು?
ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ LL.B (ಕಾನೂನು ಪದವಿ) ಪೂರ್ಣಗೊಳಿಸಿರಬೇಕು.
ಪರೀಕ್ಷೆಯು ಎಲ್ಲಿ ನಡೆಯುತ್ತದೆ?
ಸ್ಪರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರು ಪರೀಕ್ಷಾ ಕೇಂದ್ರದಲ್ಲಿ ಆಫ್‌ಲೈನ್ (OMR) ಮಾದರಿಯಲ್ಲಿ ನಡೆಸಲಾಗುತ್ತದೆ.
ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನ (Negative Marking) ಇದೆಯೇ?
ಹೌದು, ಪ್ರತಿಯೊಂದು ತಪ್ಪು ಉತ್ತರಕ್ಕೆ 0.75 (1/4th) ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳ ಸೇವಾ ಪರಿವೀಕ್ಷಣಾ ಅವಧಿ (Probation Period) ಎಷ್ಟಿರುತ್ತದೆ?
ಆಯ್ಕೆಯಾದ ಅಭ್ಯರ್ಥಿಗಳು 2 ವರ್ಷಗಳ ಕಾಲ ಸೇವಾ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ.
ಪ್ರಮುಖ ದಿನಾಂಕಗಳು
| ವಿವರಗಳು | ದಿನಾಂಕ |
| ಅಧಿಸೂಚನೆ ಹೊರಡಿಸಿದ ದಿನಾಂಕ | 20.07.2026 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 19.08.2026 (ರಾತ್ರಿ 11:59 ರವರೆಗೆ) |
| ಶುಲ್ಕ ಪಾವತಿಸಲು ಕೊನೆಯ ದಿನಾಂಕ | 19.08.2026 |
- ಕರ್ನಾಟಕ ಅಗ್ನಿಶಾಮಕ ಇಲಾಖೆ ನೇಮಕಾತಿ: 1828 ಹುದ್ದೆಗಳು
- ಕರ್ನಾಟಕ ಹೈ ಕೋರ್ಟ್ ನಲ್ಲಿ ಡೇಟಾ ಎಂಟ್ರಿ ಅಸಿಸ್ಟಂಟ್ ಹುದ್ದೆಗಳು – 28 ಜುಲೈ 2026
- ರೈಲ್ವೇ ಇಲಾಖೆಯಲ್ಲಿ 6557 ಹುದ್ದೆಗಳ ಭರ್ಜರಿ ನೇಮಕಾತಿ 2026 – 29.07.2026
- ಅಂಗನವಾಡಿ ನೇಮಕಾತಿ 2026: 168 ಹುದ್ದೆಗಳು – 30-07-2026
- ಬೆಂಗಳೂರು ಸಿವಿಲ್ ನ್ಯಾಯಾಲಯ ನೇಮಕಾತಿ 2026 – 30-07-2026
- SDA, ಕಂಪ್ಯೂಟರ್ ಆಪರೇಟರ್ ಹಾಗೂ ಪ್ಯೂನ್ ಹುದ್ದೆಗಳಿಗೆ ನೇರ ಸಂದರ್ಶನಕ್ಕೆ ಅರ್ಜಿ ಅಹ್ವಾನ: 04-08-2026
- ಡಿಸಿ ಕಚೇರಿ ನೇರ ನೇಮಕಾತಿ 2026 – 21-08-2026
- ಜಿಲ್ಲಾ ನ್ಯಾಯಾಲಯ ನೇಮಕಾತಿ 2026: 56 ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ – 24-08-2028
- ಡಿಸಿಸಿ ಬ್ಯಾಂಕ್ ನೇಮಕಾತಿ 2026 – 27-08-2026
- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2026: 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಅಹ್ವಾನ! – 31.08.2026
ಪ್ರಮುಖ ಲಿಂಕುಗಳು
| ವಿವರಗಳು | ಲಿಂಕ್ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಟೆಲಿಗ್ರಾಂ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |









