ಕರ್ನಾಟಕ ಸಮಾಜ ಕಲ್ಯಾಣ ಇಲಾಖೆ ಶಿಕ್ಷಕರ ನೇಮಕಾತಿ 2026: ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಲ್ಲಿ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದ ಖಾಲಿ ಇರುವ ವಸತಿ ಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಶಿಕ್ಷಕರಾಗಲು ಬಯಸುವ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಉದ್ಯೋಗ ವಿವರ
- ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) / ಸಮಾಜ ಕಲ್ಯಾಣ ಇಲಾಖೆ
- ಹುದ್ದೆಗಳ ಹೆಸರು: ವಸತಿ ಶಾಲಾ ಶಿಕ್ಷಕರು
- ಹುದ್ದೆಗಳ ಸಂಖ್ಯೆ: 140 (ಉಳಿಕೆ ಮೂಲ ವೃಂದ – 100, ಕಲ್ಯಾಣ ಕರ್ನಾಟಕ ವೃಂದ – 40)
- ಉದ್ಯೋಗ ಸ್ಥಳ: ಕರ್ನಾಟಕ
- ಅರ್ಜಿ ಸಲ್ಲಿಸುವ ಬಗೆ: Online (ಆನ್‌ಲೈನ್)
ಹುದ್ದೆಗಳ ವಿವರ
- ವಸತಿ ಶಾಲಾ ಶಿಕ್ಷಕರು (ಉಳಿಕೆ ಮೂಲ ವೃಂದ – RPC): 100 ಹುದ್ದೆಗಳು
- ವಸತಿ ಶಾಲಾ ಶಿಕ್ಷಕರು (ಕಲ್ಯಾಣ ಕರ್ನಾಟಕ ವೃಂದ – KK): 40 ಹುದ್ದೆಗಳು
ವಿದ್ಯಾರ್ಹತೆ
ಅಭ್ಯರ್ಥಿಗಳು ಈ ಕೆಳಗಿನ ವಿದ್ಯಾರ್ಹತೆಗಳನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರಬೇಕು:
- ಕನಿಷ್ಠ 50% ಅಂಕಗಳೊಂದಿಗೆ ಪಿಯುಸಿ ಮತ್ತು 2 ವರ್ಷಗಳ Diploma in Elementary Education (D.El.Ed/D.Ed) ಉತ್ತೀರ್ಣರಾಗಿರಬೇಕು.
- ಅಥವಾ ಕನಿಷ್ಠ 50% ಅಂಕಗಳೊಂದಿಗೆ ಪಿಯುಸಿ ಮತ್ತು 4 ವರ್ಷಗಳ Bachelor in Elementary Education (B.El.Ed) ಪೂರ್ಣಗೊಳಿಸಿರಬೇಕು.
- ಅಥವಾ ಕನಿಷ್ಠ 50% ಅಂಕಗಳೊಂದಿಗೆ ಪಿಯುಸಿ ಮತ್ತು 2 ವರ್ಷಗಳ Diploma in Education (Special Education) ಹೊಂದಿರಬೇಕು.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ವಿಕಲಚೇತನ (PwD) ಅಭ್ಯರ್ಥಿಗಳಿಗೆ ಪಿಯುಸಿಯಲ್ಲಿ ಕನಿಷ್ಠ 45% ಅಂಕಗಳು ಇರಬೇಕು.
- ಇದರೊಂದಿಗೆ ಕರ್ನಾಟಕ ಸರ್ಕಾರ ಅಥವಾ ಭಾರತ ಸರ್ಕಾರ ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ (TET – Teacher Eligibility Test) ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು.
- ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ನಿಗದಿತ ವಿದ್ಯಾರ್ಹತೆಯ ಎಲ್ಲಾ ಅಂಕಪಟ್ಟಿಗಳು ಮತ್ತು ಪ್ರಮಾಣಪತ್ರಗಳನ್ನು ಪಡೆದಿರಬೇಕು. ಫಲಿತಾಂಶಕ್ಕಾಗಿ ಕಾಯುತ್ತಿರುವವರು ಅರ್ಜಿ ಸಲ್ಲಿಸಲು ಅರ್ಹರಲ್ಲ.
ವಯೋಮಿತಿ & ವಯೋಮಿತಿಯಲ್ಲಿ ಸಡಿಲಿಕೆ
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಸರ್ಕಾರದ ಆದೇಶದಂತೆ ಒಂದು ಬಾರಿಗೆ ಅನ್ವಯವಾಗುವ 5 ವರ್ಷಗಳ ಸಡಿಲಿಕೆಯನ್ನು ಒಳಗೊಂಡಂತೆ ಗರಿಷ್ಠ ವಯೋಮಿತಿ ಈ ಕೆಳಗಿನಂತಿದೆ:
- ಸಾಮಾನ್ಯ ವರ್ಗದ (General Merit) ಅಭ್ಯರ್ಥಿಗಳಿಗೆ: ಗರಿಷ್ಠ 40 ವರ್ಷಗಳು
- ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ: ಗರಿಷ್ಠ 43 ವರ್ಷಗಳು
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ: ಗರಿಷ್ಠ 45 ವರ್ಷಗಳು
ಇತರೆ ವರ್ಗಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ವಿವರ:
- ವಿಶೇಷ ಚೇತನ (PwD) ಅಭ್ಯರ್ಥಿಗಳಿಗೆ: 10 ವರ್ಷಗಳು
- ವಿಧವೆಯರಿಗೆ: 10 ವರ್ಷಗಳು
- ಜೀತ ಕಾರ್ಮಿಕರಾಗಿದ್ದ ಅಭ್ಯರ್ಥಿಗಳಿಗೆ: 10 ವರ್ಷಗಳು
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಸೇವೆ ಸಲ್ಲಿಸಿದ ಅವಧಿಯ ಜೊತೆಗೆ ಹೆಚ್ಚುವರಿ 3 ವರ್ಷಗಳು
- ಎನ್‌ಸಿಸಿ ಪೂರ್ಣಕಾಲಿಕ ಪರಿವೀಕ್ಷಕರು ಮತ್ತು ಗ್ರಾಮೀಣ ಔದ್ಯಮೀಕರಣ ಯೋಜನೆಯ ಗ್ರಾಮ ಸಮೂಹ ಪರಿಶೀಲಕರು: ಸೇವೆ ಸಲ್ಲಿಸಿದಷ್ಟು ವರ್ಷಗಳು
- ಕರ್ನಾಟಕ ರಾಜ್ಯ ಸರ್ಕಾರ / ಸ್ಥಳೀಯ ಪ್ರಾಧಿಕಾರ / ನಿಗಮಗಳಲ್ಲಿ ಸೇವೆ ಸಲ್ಲಿಸಿದವರಿಗೆ: ಸೇವೆ ಸಲ್ಲಿಸಿದಷ್ಟು ವರ್ಷಗಳು ಅಥವಾ ಗರಿಷ್ಠ 10 ವರ್ಷಗಳು (ಯಾವುದು ಕಡಿಮೆಯೋ ಅಷ್ಟು)
- ಜನಗಣತಿ ಸಂಸ್ಥೆಯ ಮಾಜಿ / ಹಾಲಿ ನೌಕರರಿಗೆ: ಸೇವೆ ಸಲ್ಲಿಸಿದಷ್ಟು ವರ್ಷಗಳು ಅಥವಾ ಗರಿಷ್ಠ 5 ವರ್ಷಗಳು
ವೇತನಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗಳಿಗೆ 2 ವರ್ಷಗಳ ಖಾಯಂಪೂರ್ವ (Probationary) ಅವಧಿ ಇರುತ್ತದೆ.
- ಮಾಸಿಕ ವೇತನ ಶ್ರೇಣಿ: ರೂ. 41300 – 1000 – 43300 – 1125 – 47800 – 1250 – 52800 – 1375 – 58300 – 1500 – 64300 – 1650 – 74200 – 1900 – 81800
- ಪಿಂಚಣಿ ಸೌಲಭ್ಯ: ಸರ್ಕಾರದ ನಿಯಮಾನುಸಾರ ರಾಷ್ಟ್ರೀಯ ಪಿಂಚಣಿ ಯೋಜನೆ (NPS) ಅನ್ವಯವಾಗುತ್ತದೆ.
ಅರ್ಜಿ ಶುಲ್ಕ
ಶುಲ್ಕವನ್ನು ಕಡ್ಡಾಯವಾಗಿ ಆನ್‌ಲೈನ್ ಮೂಲಕವೇ ಪಾವತಿಸಬೇಕು:
- ಸಾಮಾನ್ಯ ಅರ್ಹತೆ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು (2A, 2B, 3A, 3B): ಒಟ್ಟು ರೂ. 750 (ರೂ. 500 ಅರ್ಜಿ ಶುಲ್ಕ + ರೂ. 250 ಪ್ರಕ್ರಿಯೆ ಶುಲ್ಕ)
- ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಪ್ರವರ್ಗ-1, ಮಾಜಿ ಸೈನಿಕ ಹಾಗೂ ತೃತೀಯ ಲಿಂಗಿ ಅಭ್ಯರ್ಥಿಗಳು: ಒಟ್ಟು ರೂ. 500 (ರೂ. 250 ಅರ್ಜಿ ಶುಲ್ಕ + ರೂ. 250 ಪ್ರಕ್ರಿಯೆ ಶುಲ್ಕ)
- ವಿಶೇಷ ಚೇತನ (ಅಂಗವಿಕಲ) ಅಭ್ಯರ್ಥಿಗಳಿಗೆ: ಒಟ್ಟು ರೂ. 250 (ಪ್ರಕ್ರಿಯೆ ಶುಲ್ಕ ಮಾತ್ರ)
ಒಮ್ಮೆ ಪಾವತಿಸಿದ ಶುಲ್ಕವನ್ನು ಯಾವುದೇ ಕಾರಣಕ್ಕೂ ಮರುಪಾವತಿ ಮಾಡಲಾಗುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ:
- ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
- ನೇಮಕಾತಿ ಪೋರ್ಟಲ್‌ನಲ್ಲಿ “ಸಮಾಜ ಕಲ್ಯಾಣ ಇಲಾಖೆ ವಸತಿ ಶಾಲಾ ಶಿಕ್ಷಕರ ನೇಮಕಾತಿ-2026” ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅಧಿಸೂಚನೆಯಲ್ಲಿನ ಎಲ್ಲಾ ಷರತ್ತುಗಳು ಮತ್ತು ಮಾರ್ಗಸೂಚಿಗಳನ್ನು ಎಚ್ಚರಿಕೆಯಿಂದ ಓದಿ ಅರ್ಥೈಸಿಕೊಳ್ಳಿ.
- ಹೊಸ ನೋಂದಣಿಯನ್ನು ಪೂರ್ಣಗೊಳಿಸಿ ಲಾಗಿನ್ ವಿವರಗಳನ್ನು ರಚಿಸಿಕೊಳ್ಳಿ.
- ವೈಯಕ್ತಿಕ ವಿವರಗಳು, ಶೈಕ್ಷಣಿಕ ಮಾಹಿತಿ ಮತ್ತು ಮೀಸಲಾತಿ ವಿವರಗಳನ್ನು ಸರಿಯಾಗಿ ನಮೂದಿಸಿ.
- ಇತ್ತೀಚಿನ ಬಿಳಿ ಹಿನ್ನೆಲೆಯ ಪಾಸ್‌ಪೋರ್ಟ್ ಭಾವಚಿತ್ರ (50KB ನಿಂದ 200KB) ಮತ್ತು ಕಪ್ಪು ಇಂಕ್‌ನ ಸಹಿ (50KB ನಿಂದ 70KB) ಯನ್ನು JPEG ಮಾದರಿಯಲ್ಲಿ ಅಪ್‌ಲೋಡ್ ಮಾಡಿ.
- ನೀಡಲಾದ ಎಲ್ಲಾ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ದೃಢಪಡಿಸಿಕೊಳ್ಳಿ. ಒಮ್ಮೆ ಸಲ್ಲಿಕೆಯಾದ ಅರ್ಜಿಯಲ್ಲಿ ಯಾವುದೇ ತಿದ್ದುಪಡಿಗೆ ಅವಕಾಶವಿರುವುದಿಲ್ಲ.
- ನಿಗದಿತ ಅರ್ಜಿ ಶುಲ್ಕವನ್ನು ಆನ್‌ಲೈನ್ ಪಾವತಿ ವಿಧಾನಗಳ ಮೂಲಕ ಪಾವತಿಸಿ.
- ಅರ್ಜಿ ಸಲ್ಲಿಕೆ ಪೂರ್ಣಗೊಂಡ ನಂತರ ಅರ್ಜಿ ನಮೂನೆ ಮತ್ತು ಪಾವತಿ ರಶೀದಿಯ ಪ್ರತಿಯನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದಿಟ್ಟುಕೊಳ್ಳಿ.
ಆಯ್ಕೆ ವಿಧಾನ
- ಸ್ಪರ್ಧಾತ್ಮಕ ಪರೀಕ್ಷೆ: ಆಯ್ಕೆ ಪ್ರಕ್ರಿಯೆಯನ್ನು ಆನ್‌ಲೈನ್ ಗಣಕೀಕೃತ ಪರೀಕ್ಷೆ (CBT) ಅಥವಾ ಆಫ್‌ಲೈನ್ ಓಎಂಆರ್ (OMR) ಮಾದರಿಯ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನಡೆಸಲಾಗುತ್ತದೆ.
- ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ: ಎಸ್‌ಎಸ್‌ಎಲ್‌ಸಿ ಹಂತದಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಓದದವರಿಗೆ 150 ಅಂಕಗಳ ಬಹು ಆಯ್ಕೆ ಮಾದರಿಯ ಕನ್ನಡ ಪರೀಕ್ಷೆ ಇರುತ್ತದೆ. ಇದರಲ್ಲಿ ಕನಿಷ್ಠ 50 ಅಂಕಗಳನ್ನು ಪಡೆಯುವುದು ಕಡ್ಡಾಯ (ಈ ಅಂಕಗಳನ್ನು ಮೆರಿಟ್‌ಗೆ ಪರಿಗಣಿಸುವುದಿಲ್ಲ). ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದವರಿಗೆ ಅಥವಾ ಈ ಹಿಂದೆ ಉತ್ತೀರ್ಣರಾದವರಿಗೆ ಇದರಿಂದ ವಿನಾಯಿತಿ ಇದೆ.
- ಪತ್ರಿಕೆ-1 (ಸಾಮಾನ್ಯ ಜ್ಞಾನ): 100 ಅಂಕಗಳು, 100 ಪ್ರಶ್ನೆಗಳು, 2 ಗಂಟೆಗಳ ಅವಧಿ. (ಪ್ರಚಲಿತ ಘಟನೆಗಳು, ಸಂವಿಧಾನ, ಕರ್ನಾಟಕ ಇತಿಹಾಸ, ಭೂಗೋಳ, ಆಡಳಿತ, ಗ್ರಾಮೀಣಾಭಿವೃದ್ಧಿ, ಪರಿಸರ ಮುಂತಾದವುಗಳು).
- ಪತ್ರಿಕೆ-2 (ಭಾಷೆ & ಕಂಪ್ಯೂಟರ್): 100 ಅಂಕಗಳು, 100 ಪ್ರಶ್ನೆಗಳು, 2 ಗಂಟೆಗಳ ಅವಧಿ. (ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್ ಮತ್ತು ಕಂಪ್ಯೂಟರ್ ಜ್ಞಾನ).
- ಕನಿಷ್ಠ ಅರ್ಹತಾ ಅಂಕ: ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕನಿಷ್ಠ 35% ಅಂಕಗಳನ್ನು ಪಡೆಯುವುದು ಕಡ್ಡಾಯ.
- ಋಣಾತ್ಮಕ ಮೌಲ್ಯಮಾಪನ: ಪ್ರತಿ ತಪ್ಪು ಉತ್ತರಕ್ಕೆ 0.25 (ನಾಲ್ಕನೇ ಒಂದಂಶ) ಅಂಕಗಳನ್ನು ಕಡಿತಗೊಳಿಸಲಾಗುವುದು. ಉತ್ತರಿಸದ ಪ್ರಶ್ನೆಗಳಿಗೆ 5ನೇ ವೃತ್ತವನ್ನು ಶೇಡ್ ಮಾಡಬೇಕು, ಶೇಡ್ ಮಾಡದಿದ್ದರೂ 0.25 ಅಂಕ ಕಡಿತವಾಗುತ್ತದೆ.
- ಮೂಲ ದಾಖಲಾತಿಗಳ ಪರಿಶೀಲನೆ: ಲಿಖಿತ ಪರೀಕ್ಷೆಯ ಮೆರಿಟ್ ಮತ್ತು ಮೀಸಲಾತಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಮೂಲ ದಾಖಲೆಗಳ ಪರಿಶೀಲನೆಗೆ ಕರೆಯಲಾಗುತ್ತದೆ.
ಪ್ರಶ್ನೋತ್ತರಗಳು (FAQs)
ಈ ನೇಮಕಾತಿಯಲ್ಲಿ ಒಟ್ಟು ಎಷ್ಟು ಹುದ್ದೆಗಳು ಖಾಲಿ ಇವೆ?
ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಒಟ್ಟು 140 ಹುದ್ದೆಗಳು ಖಾಲಿ ಇವೆ (ಉಳಿಕೆ ಮೂಲ ವೃಂದ 100 ಹಾಗೂ ಕಲ್ಯಾಣ ಕರ್ನಾಟಕ ವೃಂದ 40).
ಅರ್ಜಿ ಸಲ್ಲಿಸಲು ಟಿಇಟಿ (TET) ಪರೀಕ್ಷೆ ಕಡ್ಡಾಯವೇ?
ಹೌದು, ಕರ್ನಾಟಕ ಸರ್ಕಾರ ಅಥವಾ ಭಾರತ ಸರ್ಕಾರ ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ (TET) ಉತ್ತೀರ್ಣರಾಗಿರುವುದು ಕಡ್ಡಾಯ.
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನೆಗೆಟಿವ್ ಅಂಕಗಳು ಇರುತ್ತವೆಯೇ?
ಹೌದು, ಪ್ರತಿಯೊಂದು ತಪ್ಪು ಉತ್ತರಕ್ಕೆ 0.25 (ನಾಲ್ಕನೇ ಒಂದಂಶ) ಅಂಕಗಳ ಋಣಾತ್ಮಕ ಮೌಲ್ಯಮಾಪನ ಇರುತ್ತದೆ.
ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ ಎಷ್ಟು?
ಸಾಮಾನ್ಯ ವರ್ಗಕ್ಕೆ 40 ವರ್ಷ, ಪ್ರವರ್ಗ 2ಎ/2ಬಿ/3ಎ/3ಬಿಗೆ 43 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ 45 ವರ್ಷ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕವನ್ನು ಹೇಗೆ ಪಾವತಿಸಬೇಕು?
ಅರ್ಜಿ ಶುಲ್ಕವನ್ನು ಕಡ್ಡಾಯವಾಗಿ ಅಧಿಕೃತ ಜಾಲತಾಣದ ಮೂಲಕ ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್ ಅಥವಾ ಯುಪಿಐ ಬಳಸಿ ಆನ್‌ಲೈನ್ ಮೂಲಕವೇ ಪಾವತಿಸಬೇಕು.
ಪ್ರಮುಖ ದಿನಾಂಕಗಳು
| ವಿವರ | ದಿನಾಂಕ |
| ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ | 21.08.2026 |
| ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 18.09.2026 |
| ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ | 19.09.2026 |
| ಪರೀಕ್ಷಾ ದಿನಾಂಕ | ನಂತರ ಪ್ರಕಟಿಸಲಾಗುವುದು |
- ಕರ್ನಾಟಕ ಅಗ್ನಿಶಾಮಕ ಇಲಾಖೆ ನೇಮಕಾತಿ: 1828 ಹುದ್ದೆಗಳು
- SBI ಬೃಹತ್ ನೇಮಕಾತಿ 2026: 1538 ಕ್ಲರ್ಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನ – 27.08.2026
- ತೋಟಗಾರಿಕೆ ಇಲಾಖೆ ನೇಮಕಾತಿ 2026 : 30.08.2026
- ಕರ್ನಾಟಕ ಅರಣ್ಯ ಇಲಾಖೆ 775ಅರಣ್ಯ ವೀಕ್ಷಕರ ಹುದ್ದೆಗಳು – 31.08.2026
- SBI 9124 ಜೂನಿಯರ್ ಅಸೋಸಿಯೇಟ್ (ಕ್ಲರ್ಕ್) ಹುದ್ದೆಗಳಿಗೆ ಅರ್ಜಿ ಅಹ್ವಾನ – 31.08.2026
- ಜಿಲ್ಲಾ ಪಂಚಾಯತ್ ನೇಮಕಾತಿ 2026: ಕರವಸೂಲಿಗಾರರ ಹುದ್ದೆಗಳಿಗೆ ಅರ್ಜಿ ಅಹ್ವಾನ – 03.09.2026
- 2482 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನ – 07.09.2026
- ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 51 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ – 07.09.2026
- ಕರ್ನಾಟಕ ಹೈಕೋರ್ಟ್ ನೇಮಕಾತಿ 2026: ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳಿಗೆ ಅರ್ಜಿ ಅಹ್ವಾನ – 11.09.2026
- RRB JE Recruitment 2026: 3993 ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ 2026: ಅರ್ಜಿ ಸಲ್ಲಿಸಿ: 13.09.2026
- ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ನೇಮಕಾತಿ 2026 – 15-09-2026
- ಜಿಲ್ಲಾ ನ್ಯಾಯಾಲಯ ನೇಮಕಾತಿ 2026: 16.09.2026
- ಡಿಸಿ ಕಚೇರಿಯಿಂದ ನೇರ ನೇಮಕಾತಿ ಅಧಿಸೂಚನೆ 2026 – 19.09.2026
ಪ್ರಮುಖ ಲಿಂಕುಗಳು
| ವಿವರ | ಲಿಂಕ್ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ RPC | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ KK | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಟೆಲಿಗ್ರಾಮ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |









