ಯಾದಗಿರಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2026: 23 ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ

ಯಾದಗಿರಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2026: 23 ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ

ಯಾದಗಿರಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2026: ಕರ್ನಾಟಕ ನ್ಯಾಯಾಂಗ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಒಂದು ಉತ್ತಮ ಅವಕಾಶ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ ಯಾದಗಿರಿ ವತಿಯಿಂದ ಕಲ್ಯಾಣ ಕರ್ನಾಟಕ ವೃಂದದ (ಸ್ಥಳೀಯ ವೃಂದ 371-ಜೆ) ವಿವಿಧ ಖಾಲಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ. ಈ ನೇಮಕಾತಿಯ ಮೂಲಕ ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಹಾಗೂ ಸೇವಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

Telegram Channel Join Now

ಉದ್ಯೋಗ ವಿವರ

  • ನೇಮಕಾತಿ ಸಂಸ್ಥೆ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ, ಯಾದಗಿರಿ
  • ಹುದ್ದೆಗಳ ಹೆಸರು: ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು, ಸೇವಕರು
  • ಹುದ್ದೆಗಳ ಸಂಖ್ಯೆ: 23
  • ಉದ್ಯೋಗ ಸ್ಥಳ: ಯಾದಗಿರಿ (ಕರ್ನಾಟಕ)
  • ಅರ್ಜಿ ಸಲ್ಲಿಸುವ ಬಗೆ: ಆನ್‌ಲೈನ್

ಹುದ್ದೆಗಳ ವಿವರ

  • ಬೆರಳಚ್ಚುಗಾರರು: 05 ಹುದ್ದೆಗಳು
  • ಬೆರಳಚ್ಚು ನಕಲುಗಾರರು: 04 ಹುದ್ದೆಗಳು
  • ಆದೇಶ ಜಾರಿಕಾರರು: 09 ಹುದ್ದೆಗಳು
  • ಸೇವಕರು: 05 ಹುದ್ದೆಗಳು

ವಿದ್ಯಾರ್ಹತೆ

  • ಬೆರಳಚ್ಚುಗಾರರು: ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ 3 ವರ್ಷದ ಡಿಪ್ಲೋಮಾ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಇದರೊಂದಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳ ಹಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
  • ಬೆರಳಚ್ಚು ನಕಲುಗಾರರು: ದ್ವಿತೀಯ ಪಿಯುಸಿ ಅಥವಾ 3 ವರ್ಷದ ಡಿಪ್ಲೋಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳ ಕಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ಪಾಸಾಗಿರಬೇಕು.
  • ಆದೇಶ ಜಾರಿಕಾರರು: ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ (10ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಲಘು ವಾಹನ ಚಾಲನಾ ಪರವಾನಗಿ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.
  • ಸೇವಕರು: ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ವಯೋಮಿತಿ & ವಯೋಮಿತಿಯಲ್ಲಿ ಸಡಿಲಿಕೆ

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ವೇಳೆಗೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಗರಿಷ್ಠ ವಯೋಮಿತಿ ವಿವರ ಕೆಳಗಿನಂತಿದೆ:

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: ಗರಿಷ್ಠ 40 ವರ್ಷಗಳು
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: ಗರಿಷ್ಠ 43 ವರ್ಷಗಳು
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ: ಗರಿಷ್ಠ 45 ವರ್ಷಗಳು

ಸರ್ಕಾರದ ಆದೇಶದ ಅನ್ವಯ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ ಈಗಾಗಲೇ 5 ವರ್ಷಗಳ ಸಡಿಲಿಕೆ ನೀಡಿ ಮೇಲಿನ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಮಾಜಿ ಸೈನಿಕರಿಗೆ, ಸರ್ಕಾರಿ ನೌಕರರಿಗೆ, ಅಂಗವಿಕಲರಿಗೆ ಮತ್ತು ವಿಧವೆಯರಿಗೆ ನಿಯಮಾನುಸಾರ ಹೆಚ್ಚುವರಿ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ.

ವೇತನಶ್ರೇಣಿ

  • ಬೆರಳಚ್ಚುಗಾರರು: ತಿಂಗಳಿಗೆ ರೂ. 34100 ರಿಂದ ರೂ. 67600
  • ಬೆರಳಚ್ಚು ನಕಲುಗಾರರು: ತಿಂಗಳಿಗೆ ರೂ. 34100 ರಿಂದ ರೂ. 67600
  • ಆದೇಶ ಜಾರಿಕಾರರು: ತಿಂಗಳಿಗೆ ರೂ. 31775 ರಿಂದ ರೂ. 61300
  • ಸೇವಕರು: ತಿಂಗಳಿಗೆ ರೂ. 27000 ರಿಂದ ರೂ. 46675(ಹುದ್ದೆಗಳಿಗೆ ನಿಗದಿತ ವೇತನದ ಜೊತೆಗೆ ಸರ್ಕಾರದ ಇತರ ಭತ್ಯೆಗಳು ಲಭ್ಯವಿರುತ್ತವೆ.)

ಅರ್ಜಿ ಶುಲ್ಕ

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: ರೂ. 200/-
  • ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: ರೂ. 100/-
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ರೂ. 50/-
  • ಶುಲ್ಕ ಪಾವತಿ ವಿಧಾನ: ಆನ್‌ಲೈನ್ ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಅಥವಾ ಯುಪಿಐ ಮೂಲಕ ಮಾತ್ರ ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ

  1. ಅಭ್ಯರ್ಥಿಗಳು ಯಾದಗಿರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ನೇಮಕಾತಿ ಲಿಂಕ್ ಆಯ್ಕೆ ಮಾಡಿಕೊಳ್ಳಬೇಕು.
  2. ಅರ್ಜಿಯಲ್ಲಿ ಕೇಳಲಾದ ವೈಯಕ್ತಿಕ ವಿವರಗಳು, ಶೈಕ್ಷಣಿಕ ಮಾಹಿತಿ ಹಾಗೂ ಮೀಸಲಾತಿ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
  3. ನಿಗದಿತ ಅಳತೆಯಲ್ಲಿ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ (ಗರಿಷ್ಠ 50 ಕೆಬಿ) ಮತ್ತು ಸಹಿಯನ್ನು (ಗರಿಷ್ಠ 25 ಕೆಬಿ) ಜೆಪಿಜಿ ಮಾದರಿಯಲ್ಲಿ ಅಪ್‌ಲೋಡ್ ಮಾಡಿ.
  4. ಶೈಕ್ಷಣಿಕ ಅಂಕಪಟ್ಟಿಗಳು, 371-ಜೆ ಪ್ರಮಾಣಪತ್ರ, ಜಾತಿ ಮತ್ತು ಆದಾಯ ಪ್ರಮಾಣಪತ್ರ ಹಾಗೂ ಇತರ ಪೂರಕ ದಾಖಲೆಗಳನ್ನು ಪಿಡಿಎಫ್ ಮಾದರಿಯಲ್ಲಿ ಅಪ್‌ಲೋಡ್ ಮಾಡಿ.
  5. ನಮೂದಿಸಿದ ಎಲ್ಲ ವಿವರಗಳನ್ನು ಒಮ್ಮೆ ಪೂರ್ವವೀಕ್ಷಣೆ ಮಾಡಿ ಪರಿಶೀಲಿಸಿ.
  6. ನಿಗದಿತ ಅರ್ಜಿ ಶುಲ್ಕವನ್ನು ಆನ್‌ಲೈನ್ ಪಾವತಿ ಮೂಲಕ ಪಾವತಿಸಿ.
  7. ಅಂತಿಮವಾಗಿ ಅರ್ಜಿಯನ್ನು ಸಲ್ಲಿಸಿ, ಭರ್ತಿ ಮಾಡಿದ ಅರ್ಜಿಯ ಪ್ರತಿಯನ್ನು ಮುಂದಿನ ದಾಖಲಾತಿ ಪರಿಶೀಲನೆಗಾಗಿ ಮುದ್ರಿಸಿಟ್ಟುಕೊಳ್ಳಿ.

ಆಯ್ಕೆ ವಿಧಾನ

  • ಬೆರಳಚ್ಚುಗಾರರು & ಬೆರಳಚ್ಚು ನಕಲುಗಾರರು: ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ 15 ನಿಮಿಷಗಳ ಉಕ್ತಲೇಖನ ಕೊಡುವ ಬೆರಳಚ್ಚು ಸಾಮರ್ಥ್ಯ ಪರೀಕ್ಷೆ (100 ಅಂಕಗಳು – ಕನಿಷ್ಠ 50 ಅಂಕ ಗಳಿಸುವುದು ಕಡ್ಡಾಯ) ನಡೆಸಲಾಗುತ್ತದೆ. ತೇರ್ಗಡೆಯಾದ ಅಭ್ಯರ್ಥಿಗಳಿಗೆ 10 ಅಂಕಗಳ ಸಂದರ್ಶನ ನಡೆಸಿ ಅಂತಿಮವಾಗಿ ಆಯ್ಕೆ ಮಾಡಲಾಗುತ್ತದೆ.
  • ಆದೇಶ ಜಾರಿಕಾರರು: ಅರ್ಹತಾ ಪರೀಕ್ಷೆಯಲ್ಲಿ (ಎಸ್.ಎಸ್.ಎಲ್.ಸಿ) ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ 1:25 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಪಟ್ಟಿ ಸಿದ್ಧಪಡಿಸಲಾಗುತ್ತದೆ.
  • ಸೇವಕರು: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ 1:10 ಅನುಪಾತದಲ್ಲಿ ಅಭ್ಯರ್ಥಿಗಳನ್ನು 10 ಅಂಕಗಳ ಸಂದರ್ಶನಕ್ಕೆ ಆಯ್ಕೆ ಮಾಡಿ, ಸಂದರ್ಶನದ ಪ್ರದರ್ಶನದ ಮೇಲೆ ಅಂತಿಮ ಆಯ್ಕೆ ಮಾಡಲಾಗುತ್ತದೆ.

ಪ್ರಶ್ನೋತ್ತರಗಳು (FAQs)

ಈ ಹುದ್ದೆಗಳು ಯಾವ ವೃಂದದ ಅಭ್ಯರ್ಥಿಗಳಿಗೆ ಮೀಸಲಾಗಿವೆ?
ಈ ಎಲ್ಲಾ ಹುದ್ದೆಗಳು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ವೃಂದದ (371-ಜೆ) ಅಭ್ಯರ್ಥಿಗಳಿಗೆ ಮೀಸಲಾಗಿರುತ್ತವೆ.

ಅರ್ಜಿ ಸಲ್ಲಿಸಲು ನಿಗದಿತ ವಿದ್ಯಾರ್ಹತೆ ಏನು?
ಸೇವಕರು ಮತ್ತು ಆದೇಶ ಜಾರಿಕಾರರ ಹುದ್ದೆಗೆ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು. ಬೆರಳಚ್ಚುಗಾರರು ಹಾಗೂ ಬೆರಳಚ್ಚು ನಕಲುಗಾರರ ಹುದ್ದೆಗೆ ಪಿಯುಸಿ ಅಥವಾ ಡಿಪ್ಲೋಮಾ ಜೊತೆಗೆ ಸಂಬಂಧಿತ ಶ್ರೇಣಿಯ ಬೆರಳಚ್ಚು ಪರೀಕ್ಷೆಯಲ್ಲಿ ಪಾಸಾಗಿರಬೇಕು.

ಅರ್ಜಿಯನ್ನು ಆಫ್‌ಲೈನ್ ಮೂಲಕ ಕಳುಹಿಸಬಹುದೇ?
ಇಲ್ಲ, ಅರ್ಜಿಗಳನ್ನು ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್ ಮಾದರಿಯಲ್ಲಿ ಮಾತ್ರ ಸಲ್ಲಿಸಲು ಅವಕಾಶವಿದೆ.

ಆಯ್ಕೆ ಪ್ರಕ್ರಿಯೆಯಲ್ಲಿ ಸಂದರ್ಶನ ಇರುತ್ತದೆಯೇ?
ಹೌದು, ಎಲ್ಲಾ ಹುದ್ದೆಗಳಿಗೂ 10 ಅಂಕಗಳ ಸಂದರ್ಶನ ಪ್ರಕ್ರಿಯೆ ಇರುತ್ತದೆ.

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ ಯಾವುದು?
ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಲು 01.10.2026 ಕೊನೆಯ ದಿನಾಂಕವಾಗಿರುತ್ತದೆ.

ಪ್ರಮುಖ ದಿನಾಂಕಗಳು

ವಿವರದಿನಾಂಕ
ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನಾಂಕ31.08.2026
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ30.09.2026 (ರಾತ್ರಿ 11.59 ರವರೆಗೆ)
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ01.10.2026

ಪ್ರಮುಖ ಲಿಂಕುಗಳು

ವಿವರಲಿಂಕ್
ಅಧಿಕೃತ ವೆಬ್ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಆದೇಶ ಜಾರಿಕಾರರುಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಬೆರಳಚ್ಚು ನಕಲುಗಾರರುಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಬೆರಳಚ್ಚುಗಾರರುಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಪ್ಯೂನ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
Telegram Channel Join Now
Scroll to Top